ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
7ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
8ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ