೧ ಯೋಹಾನನು 4:2

ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 4

1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

2ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.

3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.

4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.

೧ ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी