ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 41

8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;

9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.

10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;

12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.

ಯೆಶಾಯ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी