ಲೂಕನು 16:11

ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?

ಸಂದರ್ಭದೊಂದಿಗೆ ಓದಿ · ಲೂಕನು 16

9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.

10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.

11ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?

12ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?

13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.

ಲೂಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी