ಲೂಕನು 16:26

ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 16

24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

27ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.

28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.

ಲೂಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी