ಯೆಶಾಯ 16:12

ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.

ಸಂದರ್ಭದೊಂದಿಗೆ ಓದಿ · ಯೆಶಾಯ 16

10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.

11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್‌ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.

12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.

13ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.

14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.

ಯೆಶಾಯ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी