ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
19ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
20ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
21ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
22ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
23ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ