ಯೆಹೆಜ್ಕೇಲನು 39:5

ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 39

3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.

4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.

5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.

6ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.

7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.

ಯೆಹೆಜ್ಕೇಲನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी