ಲೂಕನು 15:13

ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.

ಸಂದರ್ಭದೊಂದಿಗೆ ಓದಿ · ಲೂಕನು 15

11ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.

12ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.

13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.

14ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.

15ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ

ಲೂಕನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी