೨ ಅರಸುಗಳು 16:4

ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 16

2ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.

3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.

4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.

5ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.

6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.

೨ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी