ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
17ಕರ್ತನು ಮೋಶೆಗೆ--
18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
19ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
20ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
21ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ