ಧರ್ಮೋಪದೇಶಕಾಂಡ 14:24

ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 14

22ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.

23ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.

24ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ

25ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.

26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.

ಧರ್ಮೋಪದೇಶಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी