೨ ಅರಸುಗಳು 18:10

ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

8ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.

9ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.

10ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.

11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी