೨ ಕೊರಿಂಥದವರಿಗೆ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 1

1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ

2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.

4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.

5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.

೨ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी