ಮಿಕ 4:6

ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.

ಸಂದರ್ಭದೊಂದಿಗೆ ಓದಿ · ಮಿಕ 4

4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.

5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.

6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.

7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,

8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.

ಮಿಕ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी