ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ