ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ