ಯೆಹೆಜ್ಕೇಲನು 3:8

ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 3

6ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

7ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.

8ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.

9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.

10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.

ಯೆಹೆಜ್ಕೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी