ಯೆಶಾಯ 50:2

ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 50

1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.

3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.

4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.

ಯೆಶಾಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी