ನೆಹೆಮಿಯ 9:2

ಆಗ ಇಸ್ರಾಯೇಲ್‌ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

1ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್‌ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.

2ಆಗ ಇಸ್ರಾಯೇಲ್‌ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.

3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.

4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी