೨ ಸಮುವೇಲನು 15:5

ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 15

3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.

5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.

6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.

೨ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी