ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.
4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.
7ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ