ಹೋಶೇ 1:4

ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್‌ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.

ಸಂದರ್ಭದೊಂದಿಗೆ ಓದಿ · ಹೋಶೇ 1

2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.

3ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.

4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್‌ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.

5ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.

6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.

ಹೋಶೇ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी