ಲೂಕನು 9:23

ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;

ಸಂದರ್ಭದೊಂದಿಗೆ ಓದಿ · ಲೂಕನು 9

21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--

22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

23ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;

24ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.

25ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी