ದಾನಿಯೇಲನು 2:12

ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

10ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.

11ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.

12ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.

13ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.

14ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी