ಅರಣ್ಯಕಾಂಡ 16:48

ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 16

46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

47ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.

48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.

49ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.

50ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.

ಅರಣ್ಯಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी