೨ ಅರಸುಗಳು 14:4

ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 14

2ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್‌.

3ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.

4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.

5ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.

6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.

೨ ಅರಸುಗಳು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी