ಲೂಕನು 18:32

ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

ಸಂದರ್ಭದೊಂದಿಗೆ ಓದಿ · ಲೂಕನು 18

30ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.

31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

33ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी