ಯೆಶಾಯ 44:24

ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 44

22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.

23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.

25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ

26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी