ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
12ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ