ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.
40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
42ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.
43ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ