ಯೆಹೆಜ್ಕೇಲನು 18:16

ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 18

14ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;

15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,

16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,

17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.

18ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.

ಯೆಹೆಜ್ಕೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी