ಚೆಫನ್ಯ 3:9

ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.

ಸಂದರ್ಭದೊಂದಿಗೆ ಓದಿ · ಚೆಫನ್ಯ 3

7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.

8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.

9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.

10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.

11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.

ಚೆಫನ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी