ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
26ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
27ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
29ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ