ಯೆಹೆಜ್ಕೇಲನು 26:3

ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್‌ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 26

1ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

2ಮನುಷ್ಯಪುತ್ರನೇ, ತೂರ್‌, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ

3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್‌ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.

4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.

5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,

ಯೆಹೆಜ್ಕೇಲನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी