ಅಪೊಸ್ತಲರ ಕೃತ್ಯಗಳು 27:14

ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ

13ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.

14ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.

15ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು

16ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी