ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
25ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
26ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
27ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ