ಲೂಕನು 17:3

ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.

ಸಂದರ್ಭದೊಂದಿಗೆ ಓದಿ · ಲೂಕನು 17

1ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!

2ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.

3ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.

4ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.

5ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.

ಲೂಕನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी