ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
14ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ