ನ್ಯಾಯಸ್ಥಾಪಕರು 15:9

ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 15

7ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.

8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.

9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.

10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.

11ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.

ನ್ಯಾಯಸ್ಥಾಪಕರು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी