ಇದಲ್ಲದೆ ಇಸ್ರಾಯೇಲ್ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
7ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
8ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
9ಇದಲ್ಲದೆ ಇಸ್ರಾಯೇಲ್ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
10ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.
11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ