ಎಸ್ತೇರಳು 3:10

ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 3

8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.

10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.

11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.

12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.

ಎಸ್ತೇರಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी