೧ ಅರಸುಗಳು 12:10

ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--

ಸಂದರ್ಭದೊಂದಿಗೆ ಓದಿ · ೧ ಅರಸುಗಳು 12

8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.

9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.

10ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--

11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.

12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.

೧ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी