ಹೋಶೇ 12:10

ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.

ಸಂದರ್ಭದೊಂದಿಗೆ ಓದಿ · ಹೋಶೇ 12

8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.

9ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.

10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.

11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.

12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.

ಹೋಶೇ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी