ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
10ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ