ಯೂದನು 1:17

ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.

ಸಂದರ್ಭದೊಂದಿಗೆ ಓದಿ · ಯೂದನು 1

15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.

16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.

18ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.

19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.

ಯೂದನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी