ಲೂಕನು 5:26

ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.

ಸಂದರ್ಭದೊಂದಿಗೆ ಓದಿ · ಲೂಕನು 5

24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.

26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.

27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

28ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.

ಲೂಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी