ಆದಿಕಾಂಡ 37:32

ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 37

30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.

31ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ

32ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.

33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.

34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.

ಆದಿಕಾಂಡ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी