ಯೆಶಾಯ 11:13

ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.

ಸಂದರ್ಭದೊಂದಿಗೆ ಓದಿ · ಯೆಶಾಯ 11

11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.

13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.

14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.

15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.

ಯೆಶಾಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी