ಚೆಫನ್ಯ 3:15

ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಚೆಫನ್ಯ 3

13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.

14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.

15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.

16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.

17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.

ಚೆಫನ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी